ADVERTISEMENT

ಮತ್ತೆ 57 ಮಂದಿ ಸಾವು, ಒಂದೇ ದಿನ 2,313 ಕೋವಿಡ್ ಪ್ರಕರಣ ವರದಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 21:01 IST
Last Updated 10 ಜುಲೈ 2020, 21:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕೋವಿಡ್‍-19ನಿಂದಾಗಿ ರಾಜ್ಯದಲ್ಲಿ ಶುಕ್ರವಾರ 57 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 543ಕ್ಕೆ ಏರಿದೆ. ಹೊಸದಾಗಿ 2,313 ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 33,418ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 29 ಮಂದಿ, ದಕ್ಷಿಣ ಕನ್ನಡದಲ್ಲಿ 8 ಮಂದಿ, ಮೈಸೂರಿನಲ್ಲಿ 4 ಮಂದಿ, ಬೀದರ್‌ನಲ್ಲಿ 3 ಮಂದಿ, ಗದಗ, ಚಿಕ್ಕಬಳ್ಳಾಪುರ, ಕಲಬುರ್ಗಿ ಹಾಗೂ ಧಾರವಾಡದಲ್ಲಿ ತಲಾ ಇಬ್ಬರು, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ರಾಯಚೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಇವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರಾಗಿದ್ದು, ವಿವಿಧ ಕಾಯಿಲೆಗಳಿಂದಲೂ ಬಳಲುತ್ತಿದ್ದರು.

ಕಳೆದ 48 ಗಂಟೆಗಳ ಅವಧಿಯಲ್ಲಿ 4,541 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಇದರಲ್ಲಿ 2,820 ಪ್ರಕರಣಗಳು ಬೆಂಗಳೂರಿನಲ್ಲಿಯೇ ವರದಿಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 601 ಸೇರಿದಂತೆ 1,003 ಮಂದಿ ಗುಣಮುಖರಾಗಿದ್ದಾರೆ.ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳಲ್ಲಿ 472 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ

ADVERTISEMENT

ಬೆಂಗಳೂರಿನಲ್ಲಿ 1,447 ಪ್ರಕರಣ: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಹೊಸದಾಗಿ 1,447 ಮಂದಿಗೆ
ಸೋಂಕು ತಗುಲಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 15,329ಕ್ಕೆ ತಲುಪಿದೆ.ಸದ್ಯ 11,687 ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.