ADVERTISEMENT

ಹಿರಿಯೂರು: ಕೋವಿಡ್‌ ಗೆದ್ದ 96 ವರ್ಷದ ವೃದ್ಧೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 19:31 IST
Last Updated 6 ಜುಲೈ 2020, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ: ಹಿರಿಯೂರಿನ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಪ್ರಾಥಮಿಕ ಸಂಪರ್ಕಿತರಾಗಿದ್ದ ವೃದ್ಧೆಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಜೂನ್‌ 25ರಂದು ಇವರು ಜಿಲ್ಲಾ ಆಸ್ಪತ್ರೆಗೆ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಮರುದಿನ ಸೋಂಕು ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕಿನಿಂದ ಗುಣಮುಖರಾದ ರಾಜ್ಯದ ಎರಡನೇ ಅತಿ ಹಿರಿಯ ಮಹಿಳೆ ಇವರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT