ADVERTISEMENT

ಉಡುಪಿಯಲ್ಲಿ ಮತ್ತಿಬ್ಬರಿಗೆ ಕೋವಿಡ್‌–19 ದೃಢ: ಸೋಂಕಿತರ ಸಂಖ್ಯೆ ಮೂರಕ್ಕೇರಿಕೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 12:45 IST
Last Updated 29 ಮಾರ್ಚ್ 2020, 12:45 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ಉಡುಪಿ: ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ಮೂವರು ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಗುರುತಿಸಿ ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT