ADVERTISEMENT

ಲಾಕ್‌ಡೌನ್‌: ನಗರ ಸ್ಥಳೀಯ ಸಂಸ್ಥೆಗಳ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ

​ಪ್ರಜಾವಾಣಿ ವಾರ್ತೆ
Published 11 ಮೇ 2021, 5:56 IST
Last Updated 11 ಮೇ 2021, 5:56 IST
   

ಬೆಂಗಳೂರು: ರಾಜ್ಯದಲ್ಲಿ ಇದೇ 24ರವರೆಗೆ ಲಾಕ್‌ಡೌನ್‌ ಘೋಷಿಸಿರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ (ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಂಟೀನ್‌ಗಳಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಉಚಿತವಾಗಿ ಒದಗಿಸುವಂತೆ ಪೌರಾಡಳಿತ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್‌ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಕಿಟ್‌, ಆಹಾರ ಪದಾರ್ಥಗಳ ಕಿಟ್‌ಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೊ ಸಂವಾದ ನಡೆದಿತ್ತು.

ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ಈ ವಿಡಿಯೊ ಸಂವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಈ ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.