ADVERTISEMENT

ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 7:22 IST
Last Updated 24 ಆಗಸ್ಟ್ 2021, 7:22 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಗ 2.5 ರಿಂದ 4 ಲಕ್ಷ ಜನರಿಗೆ ಪ್ರತಿ ದಿನ‌ ನೀಡಲಾಗುತ್ತಿದೆ. 1.5 ಕೋಟಿ ಡೋಸ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ ಎಂದು ಹೇಳಿದರು.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ 'ವ್ಯಾಕ್ಸಿನೇಟ್ ಇಂಡಿಯಾ' ಕಾರ್ಯಕ್ರಮದಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.

ADVERTISEMENT

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರುರಾಜಭವನದಲ್ಲಿ ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಇಂದುಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,ಸಾರ್ವಜನಿಕರು ಮೈ ಮರೆಯಬಾರದು.ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು.ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ, ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.