ADVERTISEMENT

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 10,696ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 1:27 IST
Last Updated 22 ಅಕ್ಟೋಬರ್ 2020, 1:27 IST

ಬೆಂಗಳೂರು: ಕೊರೊನಾ ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 53 ಮಂದಿ ಸೇರಿದಂತೆ ರಾಜ್ಯದಲ್ಲಿ 88 ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ. 10 ದಿನಗಳಲ್ಲಿ ವರದಿಯಾದ ಗರಿಷ್ಠ ಮರಣ ಪ್ರಕರಣಗಳು ಇವಾಗಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 10,696ಕ್ಕೆ ತಲುಪಿದೆ.

ರಾಜ್ಯದಲ್ಲಿ ಹೊಸದಾಗಿ 5,872 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7.82 ಲಕ್ಷಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಕಂಡಿದ್ದು, 7 ದಿನಗಳಲ್ಲಿ 47,402 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6,771 ಮಂದಿ ಸೋಂಕಿತರಾಗಿದ್ದಾರೆ.

ಒಂದೇ ದಿನ 86,618 ಆರ್‌ಟಿ–ಪಿಸಿಆರ್ ಸೇರಿದಂತೆ 1.08 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 69.52 ಲಕ್ಷ ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 3,844 ಮಂದಿ ಸೇರಿದಂತೆ ರಾಜ್ಯದಲ್ಲಿ 9,289 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 6.71 ಲಕ್ಷ ದಾಟಿದೆ. 1 ಲಕ್ಷ ಸೋಂಕಿತರು ಸದ್ಯ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 947 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮತ್ತೆ 2,717 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.15 ಲಕ್ಷ ದಾಟಿದೆ. ಮೈಸೂರಿನಲ್ಲಿ ಸಹ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಅಲ್ಲಿ ಹೊಸದಾಗಿ 220 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ಗ್ರಾಮಾಂತರ (366), ದಾವಣಗೆರೆ (304) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.