ADVERTISEMENT

ಕೋವಿಡ್‌ 19ಗೆ ರಾಜ್ಯದಲ್ಲಿ ಮತ್ತೊಂದು ಬಲಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 14:39 IST
Last Updated 13 ಏಪ್ರಿಲ್ 2020, 14:39 IST
   

ಕಲಬುರ್ಗಿ: ಕೋವಿಡ್‌ 19ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.

ಏಪ್ರಿಲ್‌ 10ರಂದು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. 55 ವರ್ಷ ವಯೋಮಾನದ ವ್ಯಕ್ತಿಗೆ ದೆಹಲಿಯ ತಬ್ಲಿಗಿ ಜಮಾತ್‌ನಲ್ಲಿ ಭಾಗವಹಿಸಿ ಬಂದಿದ್ದ ಪಕ್ಕದ ಮನೆಯ ವ್ಯಕ್ತಿಯೊಂದಿಗಿನ ಸಂಪರ್ಕದಿಂದ ಸೋಂಕು ತಗುಲಿತ್ತು. ವ್ಯಕ್ತಿ ಸಾವಿಗೀಡಾಗಿದ್ದನ್ನು ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ. ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ಈ ವ್ಯಕ್ತಿಯ ಸಾವಿನೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ 19ನಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದಂತಾಗಿದ್ದು, ಒಟ್ಟು 13 ಜನರಿಗೆ ಸೋಂಕು ತಗುಲಿದ್ದು, 85 ಜನರನ್ನು ಆಸ್ಪತ್ರೆಗೆ ದಾಖಲಿಸಿ ನಿಗಾ ವಹಿಸಲಾಗಿದೆ.

ADVERTISEMENT

ಈ ಪ್ರಕರಣದೊಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್‌ನಿಂದಾಗಿ 7 ಮಂದಿ ಮೃತಪಟ್ಟಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.