ADVERTISEMENT

Covid–19 Karnataka Update| 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 17:04 IST
Last Updated 26 ಜೂನ್ 2020, 17:04 IST
   

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 445 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 11 ಸಾವಿರದ ಗಡಿ (11,005) ದಾಟಿದೆ.

ಕೇವಲ 48 ಗಂಟೆಗಳಲ್ಲಿ 887 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 3 ಮಂದಿ ಹಾಗೂ ಬಳ್ಳಾರಿ, ಕಲಬುರ್ಗಿ, ಬೀದರ್, ಬಾಗಲಕೋಟೆ, ಶಿವಮೊಗ್ಗ, ಧಾರವಾಡ, ಕೋಲಾರದಲ್ಲಿ ತಲಾ ಒಬ್ಬ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಸಾವಿಗೀಡಾದವರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ.

ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾದ ರೋಗಿಗಳ ಸಂಖ್ಯೆ 178ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 75 ಸೇರಿದಂತೆ 246 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶುಕ್ರವಾರ 14,733 ಮಂದಿಯ ಗಂಟಲ ದ್ರವದ ಮಾದರಿ ಪರೀಕ್ಷೆ ಮಾಡಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 144 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1935 ಕ್ಕೆ ಏರಿದೆ. ಇಲ್ಲಿ 81 ಜನ ಸೋಂಕಿಗೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.