ADVERTISEMENT

Covid-19 Karnataka Update: 1,431 ಹೊಸ ಪ್ರಕರಣ, 21 ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2021, 15:13 IST
Last Updated 15 ಆಗಸ್ಟ್ 2021, 15:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಶನಿವಾರ 1,431 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 21 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,979 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 28,69,962 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,497 ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿರುವುದಕ್ಕಿಂತಲೂ(305) ಹೆಚ್ಚು ಪ್ರಕರಣಗಳು ಇಂದು ದಕ್ಷಿಣ ಕನ್ನಡ (311) ಜಿಲ್ಲೆಯಲ್ಲಿ ವರದಿಯಾಗಿವೆ. ಉಳಿದಂತೆಉಡುಪಿಯಲ್ಲಿ (177) ಮಾತ್ರವೇ ನೂರಕ್ಕಿಂತ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93 ರಷ್ಟಿದ್ದು, ಮರಣ ಪ್ರಮಾಣ ಶೇ. 1.46 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.