ADVERTISEMENT

Covid-19 Karnataka Update: 1,065 ಹೊಸ ಪ್ರಕರಣ, 28 ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಆಗಸ್ಟ್ 2021, 13:52 IST
Last Updated 16 ಆಗಸ್ಟ್ 2021, 13:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಸೋಮವಾರ 1,065 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 28 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,30,529 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 37,007 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇಂದು ಆಸ್ಪತ್ರೆಗಳಿಂದ ಬಿಡುಗಡೆಯಾದ1,486 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 28,71,448 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,048 ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ 378 ಪ್ರಕರಣಗಳು ವರದಿಯಾಗಿದ್ದು, ದಕ್ಷಿಣ ಕನ್ನಡಯಲ್ಲಿ 333 ಹಾಗೂ ಉಡುಪಿಯಲ್ಲಿ 133 ಪ್ರಕರಣಗಳು ದಾಖಲಾಗಿವೆ.ಉಳಿದಂತೆ ಚಿಕ್ಕಮಗಳೂರು (64), ಹಾಸನ (93), ಕೊಡಗು (95) ಮತ್ತು ತುಮಕೂರಿನಲ್ಲಿ (65) ಮಾತ್ರವೇ ಐವತ್ತಕ್ಕಿಂತಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93 ರಷ್ಟಿದ್ದು, ಮರಣ ಪ್ರಮಾಣ ಶೇ.2.62ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.