ADVERTISEMENT

Covid-19 Karnataka Update: 983 ಹೊಸ ಪ್ರಕರಣ, 21 ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಸೆಪ್ಟೆಂಬರ್ 2021, 16:53 IST
Last Updated 4 ಸೆಪ್ಟೆಂಬರ್ 2021, 16:53 IST
   

ಬೆಂಗಳೂರು: ರಾಜ್ಯದಲ್ಲಿ ಶನಿವಾರ 983 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಐದು ದಿನಗಳಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳು ಇವಾಗಿವೆ. ಕಳೆದ ಸೋಮವಾರ 973 ಮಂದಿ ಸೋಂಕಿತರಾಗಿರುವುದು ಖಚಿತ ಪಟ್ಟಿತ್ತು.

ಈವರೆಗೆ ವರದಿಯಾದಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.54 ಲಕ್ಷಕ್ಕೆ ಏರಿಕೆ ಕಂಡಿದೆ.ಒಂದು ದಿನದಲ್ಲಿ 1.59 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.61ರಷ್ಟಿದೆ. 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಎರಡಂಕಿಯಲ್ಲಿವೆ.ಗದಗ, ರಾಯಚೂರು, ರಾಮನಗರ, ಯಾದಗಿರಿ ಯಲ್ಲಿಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 162 ಹಾಗೂ ಮೈಸೂರಿನಲ್ಲಿ 89 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 289 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ಇವೆ.

ADVERTISEMENT

ಕೋವಿಡ್ಪೀಡಿತರಲ್ಲಿ 21ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 7,ದಕ್ಷಿಣ ಕನ್ನಡದಲ್ಲಿ 5, ಹಾಸನ ಹಾಗೂ ಮೈಸೂರಿನಲ್ಲಿತಲಾ ಇಬ್ಬರು, ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿ ದ್ದಾರೆ.ಮೃತರ ಸಂಖ್ಯೆ 37,401ಕ್ಕೆ ತಲುಪಿದೆ. ಸೋಂಕಿತರಲ್ಲಿ 1,620 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 28.98 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,746ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.