ADVERTISEMENT

Covid-19 Karnataka Update: 1,610 ಹೊಸ ಪ್ರಕರಣ, 32 ಸೋಂಕಿತರು ಸಾವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 13:24 IST
Last Updated 7 ಆಗಸ್ಟ್ 2021, 13:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಶನಿವಾರ 1,610 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 32 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,16,927 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,773 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 28,55,862 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,266 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರು(357), ದಕ್ಷಿಣ ಕನ್ನಡ (342), ಉಡುಪಿ (131), ಹಾಸನ (129), ಮೈಸೂರಿನಲ್ಲಿ(141) ಇಂದು ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.08 ರಷ್ಟಿದ್ದು, ಮರಣ ಪ್ರಮಾಣ ಶೇ. 1.98 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.