ADVERTISEMENT

Covid-19 Karnataka Update: 1,321 ಹೊಸ ಪ್ರಕರಣ ದೃಢ, 10 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2020, 15:56 IST
Last Updated 6 ಡಿಸೆಂಬರ್ 2020, 15:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,93,006ಕ್ಕೆ ಏರಿಕೆಯಾಗಿದೆ. ಆ ಪೈಕಿ 11,856 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 8,55,750 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 25,381 ಸಕ್ರಿಯ ಪ್ರಕರಣಗಳಿದ್ದು, 280 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಇಂದು ಒಂದೇ ದಿನ 733 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 275 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರು 68, ತುಮಕೂರು 52, ಹಾವೇರಿ 43, ಮಂಡ್ಯ 41, ಹಾಸನ 41, ಬಳ್ಳಾರಿ ಜಿಲ್ಲೆಯಲ್ಲಿ 28 ಹೊಸ ಪ್ರಕರಣಗಳು ದೃಢಪಟ್ಟಿವೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.