ADVERTISEMENT

Covid-19 Karnataka Update: ಒಂದೇ ದಿನ 5,076 ಮಂದಿ ಸೋಂಕಿತರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2020, 16:06 IST
Last Updated 10 ಡಿಸೆಂಬರ್ 2020, 16:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 5,076 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,238 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 12 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,97,801 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,912 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 8,66,664 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 19,206 ಸಕ್ರಿಯ ಪ್ರಕರಣಗಳಿದ್ದು, 258 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 701 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4,549 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 53, ಮಂಡ್ಯ 46, ಹಾಸನ 42, ತುಮಕೂರು 36, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 35 ಹೊಸ ಪ್ರಕರಣಗಳು ದೃಢಪಟ್ಟಿವೆ.

ರಾಜ್ಯದಲ್ಲಿ ಇದುವರೆಗೆ 1,20,63,741 ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.