ADVERTISEMENT

Covid-19 Karnataka Update: 2,362 ಹೊಸ ಪ್ರಕರಣ ದೃಢ, 20 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ನವೆಂಬರ್ 2020, 14:56 IST
Last Updated 10 ನವೆಂಬರ್ 2020, 14:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,362 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,51,212 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 11,430 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 8,08,700 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 31,063 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 869 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಇಂದು ಬೆಂಗಳೂರು ನಗರದಲ್ಲಿ 1176, ತುಮಕೂರು 136, ಮೈಸೂರು 135, ಹಾಸನ 110, ದಕ್ಷಿಣ ಕನ್ನಡ 87, ಮಂಡ್ಯ ಜಿಲ್ಲೆಯಲ್ಲಿ 86 ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.