ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 1,781 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 8,71,342ಕ್ಕೆ ಏರಿಕೆಯಾಗಿದೆ. ಆ ಪೈಕಿ 11,641 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.
ಸಂಪಾದಕರ ಮಾತು:ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ
ಇಂದು ಒಂದೇ ದಿನ 1,799 ಮಂದಿ ಗುಣಮುಖರಾಗಿದ್ದು, ಈವರೆಗೆ 8,34,968 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 24,714 ಸಕ್ರಿಯ ಪ್ರಕರಣಗಳಿದ್ದು, 494 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿ 972, ಮೈಸೂರು 126, ತುಮಕೂರು 92, ವಿಜಯಪುರ 63, ದಕ್ಷಿಣ ಕನ್ನಡ 46, ಮಂಡ್ಯ ಜಿಲ್ಲೆಯಲ್ಲಿ 37 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.