ADVERTISEMENT

Covid-19 Karnataka Update | ಗುಣಮುಖರ ಸಂಖ್ಯೆಯಲ್ಲಿ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2020, 21:59 IST
Last Updated 21 ಸೆಪ್ಟೆಂಬರ್ 2020, 21:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 7,339 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, 9,925 ಮಂದಿ ಕೋವಿಡ್‌ನಿಂದ ಮುಕ್ತರಾಗಿದ್ದಾರೆ.

ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,26,876 ಕ್ಕೆ, ಗುಣಮುಖರ ಸಂಖ್ಯೆ 4,23,377 ಕ್ಕೆ ಏರಿದೆ. 122 ಸೋಂಕಿತರು ಮೃತಪಡುವುದರೊಂದಿಗೆ, ಸಾವಿಗೀಡಾದವರ ಒಟ್ಟು ಸಂಖ್ಯೆ 8,145ಕ್ಕೆ ಹೆಚ್ಚಳವಾಗಿದೆ.

95,335 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವವರ ಪೈಕಿ 809 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪ್ರಕರಣಗಳು 850 ಇಳಿಕೆಯಾಗಿವೆ. ಗುಣವಾದವರ ಸಂಖ್ಯೆ 1,314 ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಾವು ಕೂಡಾ 21 ಹೆಚ್ಚಳವಾಗಿವೆ. ಸೋಂಕು ಪರೀಕ್ಷೆಗಳು 60 ಸಾವಿರದಿಂದ 42 ಸಾವಿರಕ್ಕೆ ಕುಸಿದಿವೆ. 1 ಲಕ್ಷ ಸಮೀಪಕ್ಕೆ ಏರಿದ್ದ ಸಕ್ರಿಯ ಸೋಂಕು ಪ್ರಕರಣಗಳು 95 ಸಾವಿರಕ್ಕೆ ಇಳಿಕೆಯಾಗಿವೆ. ರಾಜಧಾನಿಬೆಂಗಳೂರಿನಲ್ಲಿ ಸೋಂಕು ಪ್ರಕರಣ ಕೊಂಚ ಇಳಿಕೆ ಯಾಗಿದೆ.2,886 ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 15,ದಕ್ಷಿಣ ಕನ್ನಡ 8, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ 7 ಜನ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.