ADVERTISEMENT

‘ಕೋವಿಡ್‌ನಿಂದ ಮೃತರಾದವರ ಮಕ್ಕಳ ಶಿಕ್ಷಣಕ್ಕೆ ನೆರವು’

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 16:09 IST
Last Updated 19 ಜುಲೈ 2021, 16:09 IST
ನಟ ರಮೇಶ್‌ ಅರವಿಂದ್‌ ಅವರು ಕೃತಜ್ಞತಾ ವಾಹನಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ನಿರ್ದೇಶಕ ಡಾ. ವಿಲ್ಫೆಂಡ್ ಸ್ಯಾಮ್ಸನ್, ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್‌ ಇದ್ದರು.
ನಟ ರಮೇಶ್‌ ಅರವಿಂದ್‌ ಅವರು ಕೃತಜ್ಞತಾ ವಾಹನಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ನಿರ್ದೇಶಕ ಡಾ. ವಿಲ್ಫೆಂಡ್ ಸ್ಯಾಮ್ಸನ್, ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್‌ ಇದ್ದರು.   

ಬೆಂಗಳೂರು: ‘ಕೋವಿಡ್‌ ಸೇನಾನಿಯಾಗಿ ಕೆಲಸ ಮಾಡುತ್ತಿದ್ದವರ ಪೈಕಿ ಅನೇಕರು ಸೋಂಕಿಗೊಳಪಟ್ಟು ಮೃತರಾಗಿದ್ದಾರೆ. ಅಂತಹವರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ₹2 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲು ಚಿಂತಿಸಲಾಗಿದೆ. ಪದವಿ ಪೂರೈಸಿದವರಿಗೆ ಉದ್ಯೋಗ ಕಲ್ಪಿಸುವ ಆಲೋಚನೆಯೂ ಇದೆ. ಇದಕ್ಕಾಗಿ ಸಂಬಂಧಪಟ್ಟ ಕುಟುಂಬದವರು ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್‌ ತಿಳಿಸಿದರು.

ಆಸ್ಪತ್ರೆ ವತಿಯಿಂದಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಲು ನಿರ್ಧರಿಸಿದ್ದು ಈ ಕಾರ್ಯಕ್ರಮಕ್ಕೆ ನಟ ರಮೇಶ್‌ ಅರವಿಂದ್‌ ಸೋಮವಾರ ಚಾಲನೆ ನೀಡಿದರು.

‘ಕೋವಿಡ್‌ ಸೇನಾನಿಗಳನ್ನು ಸನ್ಮಾನಿಸುವ ಉದ್ದೇಶದಿಂದ ಇದೇ 31ರವರೆಗೂ ಕೃತಜ್ಞತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ನಮ್ಮ ತಂಡದವರು ಒಟ್ಟು 5 ವಾಹನಗಳಲ್ಲಿ 300ಕ್ಕೂ ಅಧಿಕ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್‌ ಸೇನಾನಿಗಳನ್ನು ಸನ್ಮಾನಿಸಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.