ADVERTISEMENT

Covid-19 Karnataka Update: ರಾಜ್ಯದಲ್ಲಿ 958 ಹೊಸ ಪ್ರಕರಣ 

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 16:15 IST
Last Updated 23 ಡಿಸೆಂಬರ್ 2020, 16:15 IST
   

ಬೆಂಗಳೂರು: ರಾಜ್ಯದಲ್ಲಿ ಬುಧವಾರ 958 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 550 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,12,340ಕ್ಕೆ ಏರಿಕೆಯಾಗಿದೆ. ಇವತ್ತು 1,206 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,736 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೂ 12,,038 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.