ADVERTISEMENT

ಸೋಂಕಿನ ಲಕ್ಷಣ ಇರುವವರು, ಅಂ.ರಾ ಪ್ರಯಾಣಿಕರಿಗಷ್ಟೇ ಕೋವಿಡ್‌ ಪರೀಕ್ಷೆ: ಸುಧಾಕರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜನವರಿ 2022, 7:46 IST
Last Updated 28 ಜನವರಿ 2022, 7:46 IST
ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌
ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌   

ಬೆಂಗಳೂರು: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಸಲಹೆಯಂತೆ, ಕೋವಿಡ್‌ ಪರೀಕ್ಷಾ ಮಾರ್ಗಸೂಚಿಯನ್ನು ರಾಜ್ಯದಲ್ಲಿ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ.

ಈ ಸಂಬಂಧ ʼಕೂʼ ತಾಣದ ಮೂಲಕ ಮಾಹಿತಿ ನೀಡಿರುವ ಅವರು, ಸೋಂಕಿನ ಲಕ್ಷಣಗಳು ಇರುವವರು, ಕೋವಿಡ್‌ನಿಂದ ಅಪಾಯದಲ್ಲಿರುವ ಗುಂಪು ಹಾಗೂ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಮಾತ್ರವೇ ಪರೀಕ್ಷೆಗೆ ಒಳಪಡಿಸುವಂತೆ ಐಸಿಎಂಆರ್‌ ಸಲಹೆ ನೀಡಿದೆ ಎಂದುತಿಳಿಸಿದ್ದಾರೆ.

ಐಸಿಎಂಆರ್ ಇತ್ತೀಚೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಸೋಂಕಿನ ಲಕ್ಷಣವಿಲ್ಲದವರು, ಹೋಂ ಐಸೋಲೇಷನ್‌ನಿಯಮಾವಳಿ ಪ್ರಕಾರ ಗುಣಮುಖರಾದವರು, ಕೋವಿಡ್ ಚಿಕಿತ್ಸಾ ಕೇಂದ್ರಗಳಿಂದ ಬಿಡುಗಡೆಯಾಗುತ್ತಿರುವವರು, ಅಂತರರಾಜ್ಯ ಪ್ರಯಾಣಿಕರು ಸಹ ಕೋವಿಡ್ ಪರೀಕ್ಷೆಗೆ ಒಳಗಾಗಬೇಕಿಲ್ಲ ಎಂದು ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.