ADVERTISEMENT

ಡಿಸಿಎಂ ಗೋವಿಂದ ಕಾರಜೋಳಗೆ ಮತ್ತೆ ಕೋವಿಡ್‌ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 19:18 IST
Last Updated 9 ಏಪ್ರಿಲ್ 2021, 19:18 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಮುಧೋಳ(ಬಾಗಲಕೋಟೆ ಜಿಲ್ಲೆ): ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಅವರು ಗುಣಮುಖರಾಗುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಅವರಿಗೆ ನಾಲ್ಕು ದಿನ ವಿಶ್ರಾಂತಿಯ ಅಗತ್ಯವಿದೆ’ ಎಂದು ಮಣಿಪಾಲ ಆಸ್ಪತ್ರೆ ಮುಖ್ಯಸ್ಥ ಡಾ.ಸುರ್ದಶನ ಬಲ್ಲಾಳ್ ತಿಳಿಸಿದ್ದಾರೆ.

ಕಳೆದ ವರ್ಷವೂ ಅವರಿಗೆ ಸೋಂಕು ತಗುಲಿತ್ತು, ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.