ADVERTISEMENT

ಜನಾರ್ದನ ರೆಡ್ಡಿಗೆ ಕೋವಿಡ್‌–19 ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 16:08 IST
Last Updated 29 ಆಗಸ್ಟ್ 2020, 16:08 IST
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ   

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.ಈ ವಿಷಯವನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವಿಟರ್‌ ಮೂಲಕ ತಿಳಿಸಿದ್ದಾರೆ.

ಶ್ರೀರಾಮುಲು ಅವರು,‘ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT