ADVERTISEMENT

ಸಂಚಾರ ಪೊಲೀಸ್ ಸಿಬ್ಬಂದಿಗೆ ಸೋಂಕು, ‘ಸಂಚಾರ ನಿರ್ವಹಣಾ ಕೇಂದ್ರ’ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 9:43 IST
Last Updated 27 ಜೂನ್ 2020, 9:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಂಚಾರ ಪೊಲೀಸರೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ‘ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ)’ ಸೀಲ್‌ಡೌನ್‌ ಮಾಡಲಾಗಿದೆ.

ಇನ್ಫೆಂಟ್ರಿ ರಸ್ತೆಯಲ್ಲಿರುವ ಕಮಿಷನರ್ ಕಚೇರಿಯನ್ನು ಶುಕ್ರವಾರ ಸಂಜೆಯಿಂದಲೇ ಸೀಲ್‌ಡೌನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆಯೇ ಟಿಎಂಸಿ ಸಹ ಸೀಲ್‌ಡೌನ್ ಮಾಡಿ ಇಡೀ ಕೇಂದ್ರವನ್ನು ಸ್ಯಾನಿಟೈಸ್ ಮಾಡಿಸಲಾಗಿದೆ.

ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್‌.ರವಿಕಾಂತೇಗೌಡ ಹಾಗೂ ಸಂಚಾರ ವಿಭಾಗದ ಡಿಸಿಪಿಗಳ ಕಚೇರಿ ಇದೇ ಕೇಂದ್ರದಲ್ಲಿದೆ. ಇಲ್ಲಿಯ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಇರುವ ಮಾಹಿತಿ ಇದ್ದು, ಹೀಗಾಗಿಯೇ ಬೆಳಿಗ್ಗೆಯೇ ಕೇಂದ್ರಕ್ಕೆ ಬಂದಿದ್ದ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕೇಂದ್ರವನ್ನು ಸೀಲ್‌ಡೌನ್ ಮಾಡಿಸಿ ಹೋಗಿದ್ದಾರೆ.

ADVERTISEMENT

ಸಂಜೆ ಬರುವ ಕೊರೊನಾ ಸೋಂಕಿತ ಪಟ್ಟಿಯಲ್ಲಿ ಸಿಬ್ಬಂದಿ ಬಗ್ಗೆ ಮಾಹಿತಿ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.