ಬೆಂಗಳೂರು: ಕೋವಿಡ್ 19 ನಿಂದ 64 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇವರು ಹೃದಯ, ಶ್ವಾಸಕೋಶ, ಅಧಿಕ ರಕ್ತದೊತ್ತಡ, ಕ್ಷಯ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇವರ ಸಾವಿಗೆ ಕೊರೊನಾ ಜೆಎನ್. 1 ಕಾರಣವಲ್ಲ. ಕೋವಿಡ್ ಸೋಂಕು ದೃಢಪಟ್ಟಿತ್ತು. ಇವರು ಚಾಮರಾಜಪೇಟೆ ನಿವಾಸಿ ಎಂದು ಅವರು ತಿಳಿಸಿದರು. ಕೇಂದ್ರ ಆರೋಗ್ಯ ಸಚಿವರ ಜತೆ ಕೋವಿಡ್ ಕುರಿತ ವರ್ಚುವಲ್ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.