ADVERTISEMENT

Covid-19 Karnataka Update: 792 ಹೊಸ ಪ್ರಕರಣ, 2 ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 16:36 IST
Last Updated 10 ಜನವರಿ 2021, 16:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 792 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.27 ಲಕ್ಷ ತಲುಪಿದ್ದು, ಈ ಪೈಕಿ 9.57 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 12,140 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ, 9,649 ಸಕ್ರಿಯ ಪ್ರಕರಣಗಳಿವೆ.

ಭಾನುವಾರ 593 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಸ್ತುತ 202 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.