ಬೆಂಗಳೂರು: ರಾಜ್ಯದಾದ್ಯಂತ ಭಾನುವಾರ 20,378 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 382 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ. ಆ ಪೈಕಿ 28,679 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 22,17,117 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 3,42,010 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 4,734 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 213 ಮಂದಿ ಮೃತಪಟ್ಟಿದ್ದಾರೆ. ಹಾಸನ 2,227, ಮೈಸೂರು 1,559, ಬೆಳಗಾವಿ 1,171, ಚಿತ್ರದುರ್ಗ 805, ತುಮಕೂರು 773, ದಕ್ಷಿಣ ಕನ್ನಡ 727, ಚಿಕ್ಕಮಗಳೂರು ಜಿಲ್ಲೆಯಲ್ಲಿ 671 ಹೊಸ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ 1.87ಕ್ಕೆ ಇಳಿಕೆಯಾಗಿದ್ದು, ಸೋಂಕು ದೃಢ ಪ್ರಮಾಣವು ಶೇ 14.68ಕ್ಕೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಇಂದು 1,38,809 ಕೊರೊನಾ ಮಾದರಿ ಸೇರಿದಂತೆ ಒಟ್ಟು 2,96,14,631 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ... ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಮದ್ಯವಿಲ್ಲ, ಸಂಬಳವಿಲ್ಲ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.