ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ 7626 ಮಂದಿ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕು ತಗುಲಿ, ಚೇತರಿಸಿಕೊಂಡಿರುವವರ ಸಂಖ್ಯೆ 1,84,568ಕ್ಕೆ ಏರಿಕೆಯಾಗಿದೆ.
ರಾಜ್ಯದ ವಿವಿಧೆಡೆ ಇಂದು ಒಂದೇ ದಿನ 7330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 82,677 ಸೋಂಕಿತರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 727 ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಈವರೆಗೆ ಒಟ್ಟು 4615 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಶನಿವಾರ ಮೃತಪಟ್ಟವರ ಸಂಖ್ಯೆ 93 ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದ ವಿವಿಧೆಡೆ ಇಂದು ಒಟ್ಟು 58,618 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೆ ಒಟ್ಟು 23,73,103 ಮಾದರಿಗಳ ತಪಾಸಣೆ ನಡೆದಿದೆ.
ಬೆಂಗಳೂರು ನಗರದಲ್ಲಿ ಶನಿವಾರ ಅತಿಹೆಚ್ಚು ಅಂದರೆ 2979 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 533, ಉಡುಪಿ ಜಿಲ್ಲೆಯಲ್ಲಿ 348 ಮತ್ತು ಬೆಳಗಾವಿ ಜಿಲ್ಲೆಯಲ್ಲಿ 312 ಮಂದಿಯಲ್ಲಿ ಒಂದೇ ದಿನ ಸೋಂಕು ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.