ADVERTISEMENT

Covid 19 Karnataka Update: 293 ಹೊಸ ಪ್ರಕರಣ, 4 ಸಾವು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 15:24 IST
Last Updated 9 ನವೆಂಬರ್ 2021, 15:24 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 293 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಅಸುನೀಗಿದ್ದಾರೆ. ಇದೇ ಅವಧಿಯಲ್ಲಿ 323 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,90,528 ಕ್ಕೆ ಏರಿದ್ದು, 29,44,422 ಮಂದಿ ಚೇತರಿಸಿಕೊಂಡಿದ್ದಾರೆ. 38,122 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 7,955 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೋವಿಡ್ ದೃಢ ಪ್ರಮಾಣ ಶೇಕಡಾ 0.36 ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 1.36 ರಷ್ಟಿದೆ.

ಬೆಂಗಳೂರು ನಗರದಲ್ಲಿ 186 ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.