ADVERTISEMENT

Covid 19 Karnataka Update: 328 ಹೊಸ ಪ್ರಕರಣ, 9 ಸಾವು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 15:24 IST
Last Updated 10 ನವೆಂಬರ್ 2021, 15:24 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 328 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸಾವಿಗೀಡಾಗಿದ್ದಾರೆ. 247 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,90,856ಕ್ಕೆ ಏರಿದ್ದು, 29,44,669 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 38,131 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 8,027 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.27ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 2.74ರಷ್ಟಿದೆ.

ಬೆಂಗಳೂರಿನಲ್ಲಿ 176 ಪ್ರಕರಣಗಳು ದೃಢಪಟ್ಟಿದ್ದು, 5 ಜನರು ಸಾವಿಗೀಡಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.