ADVERTISEMENT

Covid 19 Karnataka Update: 245 ಹೊಸ ಪ್ರಕರಣ, 3 ಸಾವು

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 14:47 IST
Last Updated 13 ನವೆಂಬರ್ 2021, 14:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳಲ್ಲಿ 245 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 3 ಮಂದಿ ಮೃತಪಟ್ಟಿದ್ದಾರೆ. 245 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಈವರೆಗೆ ಕೋವಿಡ್ ದೃಢಪಟ್ಟ ಪ್ರಕರಣಗಳ ಒಟ್ಟು ಸಂಖ್ಯೆ 29,91,614ಕ್ಕೆ ಏರಿದ್ದು, 29,45,415 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಒಟ್ಟು 38,143 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.

ರಾಜ್ಯದಲ್ಲಿ ಸದ್ಯ 8027 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡಾ .24ರಷ್ಟಿದ್ದು, ಮರಣ ಪ್ರಮಾಣ ಶೇಕಡಾ 1.22ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 154 ಪ್ರಕರಣಗಳು ದೃಢಪಟ್ಟಿದ್ದು, 3 ಸಾವು ಸಂಭವಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.