ADVERTISEMENT

Covid 19 Karnataka Update: 322 ಹೊಸ ಪ್ರಕರಣ, 3 ಸಾವು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 16:04 IST
Last Updated 27 ನವೆಂಬರ್ 2021, 16:04 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 322 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ176 ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,95,285ಕ್ಕೆ ಏರಿದ್ದು, 29,50,306 ಮಂದಿ ಚೇತರಿಸಿಕೊಂಡಿದ್ದಾರೆ. ಈ ವರೆಗೆ ರಾಜ್ಯದಲ್ಲಿ ಕೋವಿಡ್‌ನಿಂದ ಒಟ್ಟು 38,196 ಮಂದಿ ಅಸುನೀಗಿದ್ದಾರೆ.

ರಾಜ್ಯದಲ್ಲಿ ಸದ್ಯ 6,754 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ದೃಢ ಪ್ರಮಾಣ ಶೇಕಡ 0.34 ಮತ್ತು ಮರಣ ಪ್ರಮಾಣ ಶೇಕಡ 0.93ರಷ್ಟಿದೆ.

ADVERTISEMENT

ಬೆಂಗಳೂರು ನಗರದಲ್ಲಿ 149 ಪ್ರಕರಣಗಳು ದೃಢಪಟ್ಟಿದ್ದು, ಧಾರವಾಡದಲ್ಲಿ 73 ಮತ್ತು ಮೈಸೂರಿನಲ್ಲಿ 27 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.