ಬೆಂಗಳೂರು: ರಾಜ್ಯದಲ್ಲಿ ಬುಧವಾರ 1,769 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 30 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 29,11,727ಕ್ಕೆ ಏರಿಕೆಯಾಗಿದೆ. ಆ ಪೈಕಿ 36,680 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 28,50,717 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,305 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರು 411, ದಕ್ಷಿಣ ಕನ್ನಡ 350, ಮೈಸೂರು 143, ಹಾಸನ 112, ಚಿಕ್ಕಮಗಳೂರು 67, ಬೆಳಗಾವಿ ಜಿಲ್ಲೆಯಲ್ಲಿ 31 ಮತ್ತು ತುಮಕೂರಿನಲ್ಲಿ 53 ಹೊಸ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 1.04 ರಷ್ಟಿದ್ದು, ಮರಣ ಪ್ರಮಾಣ ಶೇ 1.69 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.