ADVERTISEMENT

Covid-19 Karnataka Update: ರಾಜ್ಯದಲ್ಲಿ 7,384 ಮಂದಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 15:15 IST
Last Updated 28 ಅಕ್ಟೋಬರ್ 2020, 15:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳ ಅವಧಿಯಲ್ಲಿ 3,146 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 7,384 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 55 ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,12,784ಕ್ಕೆ ಏರಿಕೆಯಾಗಿದೆ. ಆ ಪೈಕಿ 11,046 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 7,33,558 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 68,161 ಸಕ್ರಿಯ ಪ್ರಕರಣಗಳಿದ್ದು, 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 1,612 ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಸದ್ಯ 43,760 ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.