ADVERTISEMENT

Covid-19 Karnataka Update: ಮತ್ತೆ 11 ಪ್ರಕರಣ, ಸೋಂಕಿತರ ಸಂಖ್ಯೆ 523ಕ್ಕೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 12:23 IST
Last Updated 28 ಏಪ್ರಿಲ್ 2020, 12:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 6 ಕಲಬುರ್ಗಿ, 1 ಗದಗ, ಬಾಗಲಕೋಟೆಯಲ್ಲಿ 3 ಮತ್ತು ಮತ್ತೊಂದು ಬೆಂಗಳೂರಿನಲ್ಲಿ ದಾಖಲಾಗಿವೆ.

ಏಪ್ರಿಲ್ 27ರ ಸಂಜೆ 5 ಗಂಟೆಯಿಂದ ಏಪ್ರಿಲ್ 28ರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ 11 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿನಿಂದಾಗಿ 20 ಜನ ಮೃತಪಟ್ಟಿದ್ದಾರೆ. 207 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆತಿಳಿಸಿದೆ.

ಹೊಸದಾಗಿ ಸೋಂಕು ತಗುಲಿದವರಲ್ಲಿ ಆರು ಜನ ಪುರುಷರು ಮತ್ತು ನಾಲ್ವರು ಮಹಿಳೆಯರು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.