ADVERTISEMENT

Covid-19 Karnataka Update: ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 16:49 IST
Last Updated 27 ಅಕ್ಟೋಬರ್ 2020, 16:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದ್ದು, ಚೇತರಿಕೆ ಸಂಖ್ಯೆ ಹೆಚ್ಚಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ರಾಜ್ಯದಾದ್ಯಂತ 24 ಗಂಟೆಗಳ ಅವಧಿಯಲ್ಲಿ 3,691 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 7,740 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 44 ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,09,638ಕ್ಕೆ ಏರಿಕೆಯಾಗಿದೆ. ಆ ಪೈಕಿ 10,991 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 7,27,298 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 71,330 ಸಕ್ರಿಯ ಪ್ರಕರಣಗಳಿದ್ದು, 944 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 1,874 ಪ್ರಕರಣಗಳು ವರದಿಯಾಗಿದ್ದು, 24 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಸದ್ಯ 46,628 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.