ADVERTISEMENT

Covid-19 Karnataka Update: 525 ಹೊಸ ಪ್ರಕರಣ ವರದಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 16:32 IST
Last Updated 10 ಜೂನ್ 2022, 16:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 525 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇದುವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ39,55,309ಕ್ಕೆ ಏರಿದೆ. ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಗಳಿಂದ ಬಿಡುಗಡೆಯಾದ228 ಮಂದಿಯೂ ಸೇರಿದಂತೆ ಈವರೆಗೆ ಚೇತರಿಸಿಕೊಂಡವರ ಒಟ್ಟು ಸಂಖ್ಯೆ39,12,024ಕ್ಕೆ ತಲುಪಿದೆ.ಇಂದು ಒಟ್ಟು22,673 ಜನರಿಗೆ ಕೋವಿಡ್ ಮಾದರಿ ಪರೀಕ್ಷೆ ನಡೆಸಲಾಗಿದೆ.

ಶುಕ್ರವಾರ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಆದರೆ, ರಾಜ್ಯದಲ್ಲಿ ಇದುವರೆಗೆ40,066 ಮಂದಿ ಮೃತಪಟ್ಟಿದ್ದಾರೆ.ಸದ್ಯ 3,177 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇ 2.31 ರಷ್ಟಿದೆ.

ADVERTISEMENT

ರಾಜಧಾನಿ ಬೆಂಗಳೂರಿನಲ್ಲೇ 494 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಮೈಸೂರಿನಲ್ಲಿ 8, ದಕ್ಷಿಣ ಕನ್ನಡದಲ್ಲಿ 7, ಬಳ್ಳಾರಿಯಲ್ಲಿ 4, ಉಡುಪಿಯಲ್ಲಿ 3, ಹಾಸನ, ಚಿತ್ರದುರ್ಗ ಹಾಗೂ ಬೆಳಗಾವಿಯಲ್ಲಿ ತಲಾ 2 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಧಾರವಾಡದಲ್ಲಿ ತಲಾ ಒಂದೊಂದು ಪ್ರಕರಣಗಳು ಬೆಳಕಿಗೆ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.