ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ 19 ಪ್ರಕರಣಗಳ ಸಂಖ್ಯೆ ಮತ್ತೆ 500ರ ಗಡಿ ದಾಟಿದೆ. ಸೋಮವಾರ 397ಕ್ಕೆ ಇಳಿಕೆಯಾಗಿದ್ದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮಂಗಳವಾರ 523ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯಿಂದ 575 ಮಂದಿ ಕೊರೊನಾ ಸೋಂಕಿತರು ಮಂಗಳವಾರ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು 29,29,008 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾದಂತಾಗಿದೆ.
ಮಂಗಳವಾರ ಒಟ್ಟು 87,303 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 4, ಉತ್ತರ ಕನ್ನಡದಲ್ಲಿ 3, ಮೈಸೂರು 2, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ದಕ್ಷಿಣ ಕನ್ನಡ, ಗದಗ, ತುಮಕೂರು ಜಿಲ್ಲೆಗಳಲ್ಲಿ ತಲಾ 1 ಸಾವು ಕೋವಿಡ್ 19 ಕಾರಣದಿಂದ ಸಂಭವಿಸಿದೆ. ಇದುವರೆಗೆ ಒಟ್ಟು 37,845 ಮಂದಿ ಕೊರೊನಾದಿಂದ ಮೃತರಾಗಿದ್ದಾರೆ.
ಸೋಂಕು ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.59% ಇದೆ. ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.67% ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.