ADVERTISEMENT

Covid-19 Karnataka Update: ರಾಜ್ಯದಲ್ಲಿ 254 ಪ್ರಕರಣ, 2 ಸಾವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 16:53 IST
Last Updated 3 ನವೆಂಬರ್ 2021, 16:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 254 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 2 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 29,89,014ಕ್ಕೆ ಏರಿಕೆಯಾಗಿದೆ. 38,091 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 29,42,588 ಮಂದಿ ಸೋಂಕಿತರು ಈವರೆಗೆ ಗುಣಮುಖರಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ ರಾಜ್ಯದಲ್ಲಿ 8,306 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.33ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 151, ಮೈಸೂರಿನಲ್ಲಿ 19, ದಕ್ಷಿಣ ಕನ್ನದಲ್ಲಿ 12 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 27 ಜಿಲ್ಲೆಗಳಲ್ಲಿ ಹೊಸ ಮರಣ ಪ್ರಕರಣಗಳು ವರದಿಯಾಗಿಲ್ಲ.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಬುಧವಾರ 76.420 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.