ADVERTISEMENT

Covid-19 Karnataka Update: 6,151 ಹೊಸ ಪ್ರಕರಣ, 49 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2022, 14:44 IST
Last Updated 7 ಫೆಬ್ರುವರಿ 2022, 14:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 6,151 ಹೊಸ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಶೇ 6.19ರಷ್ಟಿದ್ದು, ಮರಣ ಪ್ರಮಾಣ ಶೇ 0.79ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇಂದು (ಸೋಮವಾರ) 16,802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 87,080 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರಿನಲ್ಲಿ ಹೊಸದಾಗಿ 2,718 ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಸದ್ಯ 35,631 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.