ADVERTISEMENT

Covid-19 Karnataka Update: 10 ಸಾವಿರದ ಗಡಿಯೊಳಗೆ ಸಕ್ರಿಯ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2022, 19:39 IST
Last Updated 23 ಫೆಬ್ರುವರಿ 2022, 19:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. 9,378 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಒಂದು ದಿನದ ಅವಧಿಯಲ್ಲಿ 72 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 667 ಮಂದಿ ಕೋವಿಡ್ ಪೀಡಿತರಾಗಿರುವುದುದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 0.91ಕ್ಕೆ ಇಳಿಕೆಯಾಗಿದೆ. 13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಹಾಗೂ 14 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿ ವರದಿಯಾಗಿವೆ. ಬಾಗಲಕೋಟೆ ಹಾಗೂ ಬೀದರ್‌ನಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ.

ಬೆಂಗಳೂರಿನಲ್ಲಿ 368 ಮಂದಿ ಸೋಂಕಿತರಾಗಿದ್ದಾರೆ. ಬೆಳಗಾವಿಯಲ್ಲಿ 32, ಮೈಸೂರು ಹಾಗೂ ಶಿವಮೊಗ್ಗದಲ್ಲಿ ತಲಾ 28, ಬಳ್ಳಾರಿಯಲ್ಲಿ 24 ಹಾಗೂ ತುಮಕೂರಿನಲ್ಲಿ 20 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 20 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 39.38 ಲಕ್ಷಕ್ಕೆ ಏರಿಕೆಯಾಗಿದೆ.

ADVERTISEMENT

ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 849 ಮಂದಿ ಸೇರಿದಂತೆ ರಾಜ್ಯದಲ್ಲಿ 1,674 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 38.89 ಲಕ್ಷಕ್ಕೆ ತಲುಪಿದೆ. 12 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿದೆ.

ಕೊರೊನಾ ಸೋಂಕಿತರಲ್ಲಿ 21 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 15, ಚಿತ್ರದುರ್ಗದಲ್ಲಿ ಇಬ್ಬರು, ಉಡುಪಿ, ಕೋಲಾರ, ದಕ್ಷಿಣ ಕನ್ನಡ ಹಾಗೂ ಬಳ್ಳಾರಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 3.14 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 39,866ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.