ADVERTISEMENT

Covid-19 Karnataka Update: ರಾಜ್ಯದಲ್ಲಿ 8.42 ಲಕ್ಷ ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ನವೆಂಬರ್ 2020, 19:19 IST
Last Updated 26 ನವೆಂಬರ್ 2020, 19:19 IST
ಬೆಂಗಳೂರಿನಲ್ಲಿ ನಡೆದ ಕೋವಿಡ್‌ ಪತ್ತೆ ಪರೀಕ್ಷೆ
ಬೆಂಗಳೂರಿನಲ್ಲಿ ನಡೆದ ಕೋವಿಡ್‌ ಪತ್ತೆ ಪರೀಕ್ಷೆ   
""

ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,505 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.79 ಲಕ್ಷಕ್ಕೆ ಏರಿಕೆಯಾಗಿದೆ.

ಈ ತಿಂಗಳು 26 ದಿನಗಳಲ್ಲಿ 56,148 ಮಂದಿ ಕೋವಿಡ್ ಪೀಡಿತ ರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,159 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 12 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,726ಕ್ಕೆ ಏರಿಕೆಯಾಗಿದೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 367 ಮಂದಿ ಸೇರಿದಂತೆ ರಾಜ್ಯದಲ್ಲಿ 1,067 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.42 ಲಕ್ಷಕ್ಕೆ ತಲುಪಿದೆ.

ಸದ್ಯ 25,316 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರಲ್ಲಿ 409 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಒಂದೇ ದಿನ 1.20 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.06 ಕೋಟಿ ಮಂದಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. 14 ದಿನಗಳ ಅವಧಿಯಲ್ಲಿ 1.29 ಲಕ್ಷ ನೇರ ಸಂಪರ್ಕಿತರು ಹಾಗೂ 1.44 ಲಕ್ಷ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ. ಕಳೆದ 7 ದಿನಗಳ ಅವಧಿಯಲ್ಲಿ 33,481 ಮಂದಿಯನ್ನು ಮನೆ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ 844 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿ ತರ ಸಂಖ್ಯೆ 3.67 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 101 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50,448ಕ್ಕೆ ತಲು ಪಿದೆ. ದಕ್ಷಿಣ ಕನ್ನಡ (57), ಹಾಸನ (51) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ಜಿಲ್ಲಾವಾರು ಅಂಕಿ ಅಂಶಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.