ಬೆಂಗಳೂರು: ರಾಜ್ಯದಲ್ಲಿ ಇಂದು 3589 ಪ್ರಕರಣಗಳು ವರದಿಯಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 11,140ಕ್ಕೆ ಏರಿದೆ.
ಇನ್ನು ಇಂದು ಒಂದೇ ದಿನ 8,521 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ ಗುಣಮುಖರಾದವರ ಸಂಖ್ಯೆ 7,49,740ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣ ಸಂಖ್ಯೆ 59,499 ಆಗಿದೆ.
ಸದ್ಯ ಐಸಿಯುನಲ್ಲಿ 935 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.