ADVERTISEMENT

Covid-19 Karnataka Update| 24 ಗಂಟೆಗಳಲ್ಲಿ 6,892 ಪ್ರಕರಣ, 59 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 15:35 IST
Last Updated 28 ಸೆಪ್ಟೆಂಬರ್ 2020, 15:35 IST
ಕೋವಿಡ್‌ ಸೋಂಕು ಪತ್ತೆ ಪರೀಕ್ಷೆ
ಕೋವಿಡ್‌ ಸೋಂಕು ಪತ್ತೆ ಪರೀಕ್ಷೆ    
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ವರದಿಯಾಗಿರುವ 6,892 ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ ಸೋಮವಾರ 5,82,458 ಕ್ಕೆ ಏರಿಕೆಯಾಗಿದೆ.

ಇನ್ನು ಈ 24 ಗಂಟೆಗಳಲ್ಲಿ ರಾಜ್ಯದಲ್ಲಿ 59 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಈ ವರೆಗೆ ಕೋವಿಡ್‌ಗೆ ಪ್ರಾಣ ತೆತ್ತವರ ಸಂಖ್ಯೆ 8,641ಕ್ಕೆ ಏರಿದೆ.

ಕಳೆದ ಒಂದು ದಿನದ ಅವಧಿಯಲ್ಲಿ 7,509 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಗುಣಮುಖರಾದವರ ಸಂಖ್ಯೆ 4,69,750 ಆಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯವಾಗಿರುವುದು 1,04,048 ಪ್ರಕರಣಗಳು ಮಾತ್ರ.

ADVERTISEMENT

ಇನ್ನುಳಿದಂತೆ 822 ಮಂದಿ ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 2,722 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೆ ಸೋಂಕು ಪ್ರಕರಣಗಳು 2,23,569 ಕ್ಕೆ ಏರಿಕೆಯಾಗಿದೆ. ಈ ಒಂದು ದಿನದ ಅವಧಿಯಲ್ಲಿ ಬೆಂಗಳೂರಲ್ಲಿ 9 ಮರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಈ ವರೆಗೆ 2,845 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.