ADVERTISEMENT

Covid-19 Karnataka Update: 8.52 ಲಕ್ಷ ಸೋಂಕಿತರು ಗುಣಮುಖ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:31 IST
Last Updated 3 ಡಿಸೆಂಬರ್ 2020, 14:31 IST
   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,446 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 13 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 8,89,113ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 11,821ಕ್ಕೆ ತಲುಪಿದೆ.

ಇಂದು ಗುಣಮುಖರಾದ 894 ಸೋಂಕಿತರೂ ಸೇರಿದಂತೆ ಇದುವರೆಗೆ ಒಟ್ಟು 8,52,584 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 24,689 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 299 ಮಂದಿ ಐಸಿಯುನಲ್ಲಿದ್ದಾರೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಗುರುವಾರ 758 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಇದುವರೆಗೆ ಒಟ್ಟು 3,71,962 ಪ್ರಕರಣಗಳು ಬೆಳಕಿಗೆ ಬಂದಿದ್ದು, 3,48,861 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.