ADVERTISEMENT

Covid-19 Karnataka Updates: ಏಳು ದಿನಗಳಲ್ಲಿ 3,764 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 20:48 IST
Last Updated 7 ಮಾರ್ಚ್ 2021, 20:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 622 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.55 ಲಕ್ಷ ದಾಟಿದೆ.

ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಈ ತಿಂಗಳು ಏಳು ದಿನಗಳ ಅವಧಿಯಲ್ಲಿ 3,764 ಮಂದಿ ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಮೂವರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,362ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 351 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.35 ಲಕ್ಷ ದಾಟಿದೆ.

ಒಂದು ದಿನದ ಅವಧಿಯಲ್ಲಿ 75 ಸಾವಿರ ಪರೀಕ್ಷೆ ನಡೆಸಲಾಗಿದೆ. ಈವರೆಗೆ 1.93 ಕೋಟಿ ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 6,862 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 115 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಬ್ರಿಟನ್‌ನಿಂದ ಮತ್ತೆ 272 ಮಂದಿ ಇಲ್ಲಿಗೆ ಬಂದಿದ್ದಾರೆ. ಕಳೆದ ನ.25ರಿಂದ ಈವರೆಗೆ ಬಂದವರ ಸಂಖ್ಯೆ 13,487ಕ್ಕೆ ತಲುಪಿದೆ. ಅವರಲ್ಲಿ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 389 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.08 ಲಕ್ಷ ದಾಟಿದೆ. ಕಲಬುರ್ಗಿಯಲ್ಲಿ 34, ಉಡುಪಿಯಲ್ಲಿ 30, ತುಮಕೂರಿನಲ್ಲಿ 25, ಬೀದರ್‌ನಲ್ಲಿ 24, ಧಾರವಾಡ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 16 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.