ADVERTISEMENT

Covid-19 Karnataka Updates: ಶೇ 5.42ಕ್ಕೆ ದೃಢ ಪ್ರಮಾಣ, 8,906 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 20:27 IST
Last Updated 8 ಜನವರಿ 2022, 20:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿಶನಿವಾರ 8,906 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 5.42ಕ್ಕೆ ಏರಿಕೆಯಾಗಿದೆ.

ಈ ಪ್ರಮಾಣ ಶೇ 5ರ ಗಡಿ ದಾಟಿದಲ್ಲಿ ಸೋಂಕು ಹರಡುವಿಕೆ ತಡೆಗೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಈ ತಿಂಗಳು 8 ದಿನಗಳಲ್ಲಿ 32,621 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 38,507ಕ್ಕೆ ಏರಿಕೆಯಾಗಿದೆ.

ರಾಜ್ಯದ 28 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಆರು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿ, 18 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಹಾವೇರಿ ಹಾಗೂ ಯಾದಗಿರಿಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ADVERTISEMENT

ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು,7,113 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ದೃಢ ಪ್ರಮಾಣ ಶೇ 10 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.