ADVERTISEMENT

Covid 19 Karnataka update: 290 ಹೊಸ ಪ್ರಕರಣ, 10 ಸಾವು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 14:52 IST
Last Updated 25 ಅಕ್ಟೋಬರ್ 2021, 14:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 290 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 10 ಮಂದಿ ಮೃತಪಟ್ಟಿದ್ದು, 408 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,86,276ಕ್ಕೆ ಏರಿದ್ದು, 29,39,647 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಮೃತರ ಒಟ್ಟು ಸಂಖ್ಯೆ 38,017 ರಷ್ಟಾಗಿದೆ.

ರಾಜ್ಯದಲ್ಲಿ ಸದ್ಯ 8,583 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ದೃಢಪಡುತ್ತಿರುವ ಪ್ರಮಾಣ ಶೇಕಡಾ 0.32ರಷ್ಟಿದೆ. ಸಾವಿನ ಪ್ರಮಾಣ ಶೇಕಡಾ 3.44 ರಷ್ಟಿದೆ.

ADVERTISEMENT

ಬೆಂಗಳೂರು ನಗರದಲ್ಲಿ 137 ಹೊಸ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ಧಾರೆ. ದಕ್ಷಿಣ ಕನ್ನಡದಲ್ಲಿ 30, ತುಮಕೂರಿನಲ್ಲಿ 26, ಹಾಸನದಲ್ಲಿ 20 ಪ್ರಕರಣ ದಾಖಾಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.