ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 48,049 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 29,068 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡ 19.23ರಷ್ಟಿದೆ. ಇಂದು 18,115 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.
ಬೆಂಗಳೂರಲ್ಲಿ ಐದು ಮಂದಿ ಸೇರಿ ರಾಜ್ಯದಲ್ಲಿ ಇಂದು 22 ಸೋಂಕಿತರು ಸಾವಿಗೀಡಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143 (ಬೆಂಗಳೂರಲ್ಲಿ 2.23 ಲಕ್ಷ)ಕ್ಕೆ ಏರಿದೆ.
ಇಂದು 2,49,832 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.