ADVERTISEMENT

ಸಾಗರ | ಶಾಸಕ ಹಾಲಪ್ಪಗೆ ಕೋವಿಡ್‌-19 ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 9:42 IST
Last Updated 4 ಆಗಸ್ಟ್ 2020, 9:42 IST
ಎಚ್.ಹಾಲಪ್ಪ ಹರತಾಳು
ಎಚ್.ಹಾಲಪ್ಪ ಹರತಾಳು   

ಬೆಂಗಳೂರು: ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಎಚ್‌.ಹಾಲಪ್ಪ ಅವರಿಗೆ ಕೋವಿಡ್‌ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ.

ಅಲ್ಲದೆ, ಅವರ ಪತ್ನಿ, ಕಾರು ಚಾಲಕ, ಓರ್ವ ಸಿಬ್ಬಂದಿಗೂ ಪಾಸಿಟಿವ್ ಎಂದು ದೃಢಪಟ್ಟಿದ್ದು, ಎಲ್ಲರೂ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಇತ್ತೀಚೆಗೆ ನನ್ನನ್ನು ಸಂಪರ್ಕಿಸಿದವರಿಗೆ ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.