ಬೆಳಗಾವಿ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್ 19 ಸೋಂಕು ತಗುಲಿರುವ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದೂ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಅವರು ಸೋಮವಾರ ರಾತ್ರಿ 11.30ಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಪರೀಕ್ಷೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.